
ನವದೆಹಲಿ: ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ಕಾಂಗ್ರೆಸ್ ಆರೋಪಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮಾನಸಿಕವಾಗಿ ಸಂಪೂರ್ಣವಾಗಿ ಭಾರತೀಯರಾಗಿಲ್ಲವಾದ್ದರಿಂದ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್ ಸುಬ್ರಮಣಿಯನ್ ಸ್ವಾಮಿಯವರಿಗೆ ನಿಜವಾದ ಟಾರ್ಗೆಟ್ ಜೇಟ್ಲಿ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಕೇವಲ ನೆಪ ಮಾತ್ರ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ದೇಶದ ಆರ್ಥಿಕತೆಯನ್ನು ಉದ್ದೇಶಪೂರ್ವಕಾಗಿ ಕುಂಠಿತಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ಮೋದಿಯವರಿಗೆ ಎರಡು ಪುಟಗಳ ಪತ್ರ ಬರೆದಿದ್ದರು.
Advertisement