ನವದೆಹಲಿ: ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಭಾರೀ ಮುಖಭಂಗವುಂಟಾಗಿದೆ. ಈ ಹಿಂದೆ ಅಸ್ಸಾಂ ಮತ್ತು ಕೇರಳದಲ್ಲಿ ಅಧಿಕಾರದ ಚಲಾಯಿಸಿದ್ದ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಮುಗ್ಗರಿಸಿ ಬಿದ್ದಿದೆ.
ಈಗಾಗಲೇ ಪ್ರಸ್ತುತ ಪಕ್ಷ ಹರ್ಯಾಣ, ಮಹಾರಾಷ್ಟ್ರ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುವ ಮೂಲಕ ಮಂಕಾಗಿದೆ.
ಇತ್ತ ಪಶ್ಚಿಮ ಬಂಗಾಳದಲ್ಲಿ ಎಡರಂಗದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೂ, ಮಮತಾ ಬ್ಯಾನರ್ಜಿಯವರ ಟಿಎಂಸಿ ಅಲೆಯೊಂದಿಗೆ ಗುದ್ದಾಡಲು ಸಾಧ್ಯವಾಗಲಿಲ್ಲ.
ಕೇರಳದಲ್ಲಿ ಅಧಿಕಾರದಲ್ಲಿದ್ದ ಯುಡಿಎಫ್ ಸರ್ಕಾರ ಅಧಿಕಾರವಧಿಯಲ್ಲಿ ಮಾಡಿದ ಹಗರಣಗಳಿಂದಲೇ ಈ ಬಾರಿ ಸ್ಥಾನ ಕಳೆದುಕೊಂಡಿದೆ.
ಆದಾಗ್ಯೂ, ಕಾಂಗ್ರೆಸ್ ನಾಯಕತ್ವದಲ್ಲಿನ ದೋಷಗಳೇ ಈ ಸೋಲುಗಳಿಗೆ ಕಾರಣ ಎಂದು ಹೇಳಬಹುದು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯುವಜನತೆಯನ್ನು ಕಾಂಗ್ರೆಸ್ನತ್ತ ಸೆಳೆಯಲು ಯತ್ನಿಸಿದರೂ ಅವರ ಪ್ರಯತ್ನಗಳು ಯಾವುದೂ ಸಫಲತೆ ಕಾಣಲೇ ಇಲ್ಲ.