ಎಲ್ಡಿಎಫ್
ದೇಶ
ಕೇರಳದಲ್ಲಿ ಕೊಚ್ಚಿ ಹೋಯ್ತು ಯುಡಿಎಫ್, ಸ್ಪಷ್ಟ ಬಹುಮತದತ್ತ ಎಡರಂಗ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು...
ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಉಮನ್ ಚಾಂಡಿ ನೇತೃತ್ವದ ಯುಡಿಎಫ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಈ ಭಾರಿ ಎಲ್ಡಿಎಫ್ 91 ಸ್ಥಾನಗಳಲ್ಲಿ ಮುನ್ನಡೆ ಪಡೆದು ಅಧಿಕಾರ ರಚಿಸುವತ್ತ ದಾಪುಗಾಲು ಇಟ್ಟಿದೆ.
ಒಟ್ಟಾರೆ 140 ಸ್ಥಾನಗಳ ಪೈಕಿ ಎಡರಂಗ 91 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಸದ್ಯ ಅಧಿಕಾರದಲ್ಲಿದ್ದ ಯುಡಿಎಫ್ ಕೇವಲ 48 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಈ ಭಾರಿ ಎನ್ಡಿಎ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಎಡರಂಗ ಪಕ್ಷದಿಂದ ಸ್ಪರ್ಧಿಸಿರುವ ಮಲಮಪುಜಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ವಿ ಅಚ್ಯುತಾನಂದನ್ 4056 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ