ಕಾಂಗ್ರೆಸ್ ಮುಕ್ತ ಭಾರತ ಮಾಡುವ ದಿಶೆಯಲ್ಲಿ ಎರಡು ಹೆಜ್ಜೆ ಮುಂದೆ: ಅಮಿತ್ ಶಾ

ಕಾಂಗ್ರೆಸ್ ಮುಕ್ತ ಭಾರತ ಮಾಡುವ ದಿಶೆಯಲ್ಲಿ ಬಿಜೆಪಿ ಎರಡು ಹೆಜ್ಜೆ ಮುಂದೆ ಹೋಗಿದೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಅವರು...
ಅಮಿತ್ ಶಾ
ಅಮಿತ್ ಶಾ
Updated on: 
ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಮಾಡುವ ದಿಶೆಯಲ್ಲಿ ಬಿಜೆಪಿ ಎರಡು ಹೆಜ್ಜೆ ಮುಂದೆ ಹೋಗಿದೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.
ಇಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಐದು ರಾಜ್ಯಗಳಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಇದು ಸಕಾರಾತ್ಮಕ ರಾಜಕೀಯದ ಗೆಲುವು ಎಂದರು.
ಬಿಜೆಪಿ ಬಲಗೊಳಿಸಲು ಕಾರ್ಯಕರ್ತರು ಶ್ರಮ ಪಟ್ಟಿದ್ದಾರೆ. ಐದು ರಾಜ್ಯಗಳ ಮತದಾರರಿಗೆ ನಾನು ಆಭಾರಿಯಾಗಿದ್ದೇನೆ ಎಂದರು. ಅಲ್ಲದೆ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಎಲ್ಲರಿಗೂ ಸ್ವಾಗತ ಎಂದರು,
ಅಸ್ಸಾಂನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡು ವರ್ಷದ ಸಾಧನೆಗೆ ಜನತೆ ಮನ್ನಣೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ಸಂಘಟನೆ ಮತ್ತಷ್ಟು ವಿಸ್ತರಣೆಯಾಗಿದೆ. ಮೊದಲ ಬಾರಿ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದರು.
ಇನ್ನೂ ಕೇರಳದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಶೇ,15ರಷ್ಟು ಮತಗಳು ಬಂದಿವೆ. ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದೆ ಎಂದು ಅಮಿತ್ ಶಾ ಹೇಳಿದರು.
ಅಸ್ಸಾಂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ. ಅಸ್ಸಾಂ ಶೀಘ್ರದಲ್ಲೇ ಅಭಿವೃದ್ಧಿಯಾಗಲಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂಬ ಭರವಸೆಯನ್ನು ಈಡೇರಿಸುತ್ತೇವೆ ಎಂದು ಅಮಿತ್ ಶಾ ತಿಳಿಸಿದರು.
ಇದೇ ವೇಳೆ ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಅಧ್ಯಕ್ಷರು ಶುಭಾಶಯ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com