
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟಿಎಂಸಿ ಮುಖಂಡೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆ ಬೆನ್ನಲ್ಲೇ ಉಭಯ ನಾಯಕಿಯರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ದು, ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈಗಷ್ಟೇ ಜಯಲಲಿತಾ ಮತ್ತು ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ್ದು, ಚುನಾವಣಾ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನು ಅಸ್ಸಾಂ ನಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದು, ಪಕ್ಷದ ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಖಾತೆ ತೆರೆದಿದ್ದು, 1 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಕೇರಳ ಬಿಜೆಪಿ ಘಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
Advertisement