ಬಿಜೆಪಿಯ ಸರ್ಬಾನಂದ ಸೋನೊವಾಲ್ ಅಸಾಂನ ನೂತನ ಮುಖ್ಯಮಂತ್ರಿ
ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದ್ದು, ಕೇಂದ್ರ ಕ್ರೀಡಾ ಮತ್ತು ಯುವಜನ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸರ್ಬಾನಂದ ಸೋನೊವಾಲ್ ಅವರನ್ನು ಬಿಜೆಪಿ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ.
84 ವಿಧಾನಸಭಾ ಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ ಸರ್ಕಾರ ರಚಿಸುವುದು ಸ್ಪಷ್ಟವಾಗಿದ್ದು ಸರ್ವಾನಂದ ಸೋನೊವಾಲ್ ಪ್ರಥಮ ಬಿಜೆಪಿ ಸರ್ಕಾರದ ನೇತೃತ್ವ ವಹಿಸಲಿದ್ದಾರೆ. ಸರ್ವಾನಂದ ಸೋನೋವಾಲ್ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಲಖೀಂಪುರ ಕ್ಷೇತ್ರದಿಂದ ಸಂಸತ್ ಗೆ ಆಯ್ಕೆಯಾಗಿ ಪ್ರಧಾನಿ ನರೇಂದ್ರ ಮೋದಿ ಮೋದಿ ಸಚಿವ ಸಂಪುಟದಲ್ಲಿ ಕ್ರೀಡಾ ಮತ್ತು ಯುವಜನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಸ್ಸಾಂ ನ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಸರ್ವಾನಂದ ಸೋನೋವಾಲ್, 2001 ರಲ್ಲಿ ಮೊದಲ ಬಾರಿಗೆ ಮೊರಾನ್ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2004 ರ ಲೋಕಸಭಾ ಚುನಾವಣೆಯಲ್ಲಿ ದಿಬ್ರುಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ