ಸೋನಿಯಾ ಗಾಂಧಿ
ದೇಶ
ಕಾಂಗ್ರೆಸ್ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ: ಸೋನಿಯಾ ಗಾಂಧಿ
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಹೊರ ಬಿದ್ದಿದ್ದು, ಐದರ ಪೈಕಿ ರಾಜ್ಯಗಳನ್ನು ಕಳೆದುಕೊಂಡಿರು ಕಾಂಗ್ರೆಸ್, ಸೋಲಿನ ಬಗ್ಗೆ...
ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ ಹೊರ ಬಿದ್ದಿದ್ದು, ಐದರ ಪೈಕಿ ರಾಜ್ಯಗಳನ್ನು ಕಳೆದುಕೊಂಡಿರು ಕಾಂಗ್ರೆಸ್, ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದಾಗಿ ಹೇಳಿದೆ.
ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ಮತದಾರರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
ಇದೇ ವೇಳೆ ಅಸ್ಸಾಂ ಹಾಗೂ ಕೇರಳದಲ್ಲಿ ಅಧಿಕಾರ ಕಳೆದುಕೊಂಡಿರುವ ಪಕ್ಷದ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದು ಸೋನಿಯಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಐದು ರಾಜ್ಯಗಳ ಪೈಕಿ ಎರಡರಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್, ಪುದುಚೇರಿಯಲ್ಲಿ ಮಾತ್ರ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ