ಕೇಜ್ರಿವಾಲ್ ವಿರುದ್ಧದ ವಿಚಾರಣೆಗೆ ತಡೆ ನೀಡಲು ಕೋರ್ಟ್ ನಿರಾಕರಣೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 
ನವದೆಹಲಿ: ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. 
ಕೇಂದ್ರ ಸಚಿವ ಅರುಣ್ ಜೇಟ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಐವರು ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇದಕ್ಕೆ ತಡೆ ನೀಡುವಂತೆ ಕೋರಿ ಕೇಜ್ರಿವಾಲ್ ಮತ್ತು ಐವರು ಆಪ್ ನಾಯಕರು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ. 
ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲ ರಾಮ್ ಜೇತ್ಮಲಾನಿ ಅವರು ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಅವರ ಮುಂದೆ ವಾದ ಮಂಡಿಸಿದರು. ಎಎಪಿ ನಾಯಕರ ವಿರುದ್ಧ ಒಂದೇ ಆರೋಪದಡಿ ನಾಗರಿಕ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಪ್ರಕರಣವನ್ನು ಕೈಬಿಡಬೇಕು ಎಂದು ವಾದಿಸಿದ್ದರು. 
ಈ ಹಿಂದೆ ಡಿಡಿಸಿಎಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಅರುಣ್ ಜೇಟ್ಲಿ ಅವರ ಪಾತ್ರವೂ ಇದೆ ಎಂದು ಆರೋಪಿಸಿದ್ದ ಆಮ್ ಆದ್ಮಿ ಪಕ್ಷ ಈ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕ  ಟೀಕೆ ಮಾಡಿತ್ತು. ಈ ಹಿನ್ನಲೆಯಲ್ಲಿ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ಕೇಜ್ರಿವಾಲ್ ಹಾಗೂ ಸಹಚರರು, ಸುಳ್ಳು ಆರೋಪ ಮಾಡುತ್ತಿದ್ದಾರೆ. ಡಿಡಿಸಿಎ ಹಗರಣದಲ್ಲಿ ವಿನಾಕಾರಣ ತಮ್ಮ  ಕುಟುಂಬದವರ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‍ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com