ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ.
ರಾಜ್ಯಪಾಲ ಪಿ ಸದಾಶಿವಂ ಅವರಿಗೆ ಉಮನ್ ಚಾಂಡಿ ಅವರು ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ಕೇರಳದಲ್ಲಿ 47 ಕ್ಷೇತ್ರಗಳಲ್ಲಿ ಗೆಲವು ಕಂಡ ಯುಡಿಎಫ್, ಎಲ್ ಡಿಎಫ್ ಮುಂದೆ ಪರಾಭವಗೊಂಡಿತ್ತು.
ಕೇರಳದಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್ ಗೆ ಅಧಿಕಾರ ಸಿಕ್ಕಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಎಲ್ ಡಿಎಫ್ 91 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.
ಸೋಲಾರ್ ಹಗರಣ ಮತ್ತು ಬಾರ್ ಲಂಚ ಹಗರಣಗಳ ಆರೋಪ ಹೊತ್ತಿರುವ ಮುಖ್ಯಮಂತ್ರಿ ಉಮನ್ ಚಾಂಡಿ ಅಧಿಕಾರ ಕಳೆದುಕೊಂಡಿದ್ದಾರೆ. ಈ ಮೂಲಕ ಕರ್ನಾಟಕ ಹೊರತುಪಡಿಸಿ ಇತರ ಎಲ್ಲ ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡತಾಗಿದೆ.