ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲು ಸಿಪಿಐ (ಎಂ) ರಾಜ್ಯ ಸಮಿತಿ ಶುಕ್ರವಾರ ಬೆಳಗ್ಗೆ ಸಭೆ ಸೇರಿದೆ.
ಆ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪಾಲಿಟ್ ಬ್ಯೂರೋ ಸದಸ್ಯ ಪ್ರಕಾಶ್ ಕಾರಾಟ್ ಉಪಸ್ಥಿತರಾಗಲಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪಾಲಿಟ್ ಬ್ಯೂರೋ ಸದಸ್ಯ ಪಿಣರಾಯಿ ವಿಜಯನ್ ಅವರನ್ನೇ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದ್ದು, ವಿಎಸ್ ಅಚ್ಯುತಾನಂದನ್ ಅವರಿಗೆ ಸಚಿವ ಸಂಪುಟದಲ್ಲಿ ಪ್ರಧಾನ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.
ಅದೇ ವೇಳೆ ಕೇರಳದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಎರಡು ದಿವಸಗಳಲ್ಲಿ ಗೊತ್ತಾಗಲಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.