
ಲಖನೌ: ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಶಂಕಿಸಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಥುರಾದಲ್ಲಿ ಈ ಘಟನೆ ನಡೆದಿದ್ದು, ಗೋವುಗಳನ್ನು ಸಾಗಣೆ ಮಾಡುತ್ತಿದ್ದ ಗುಂಪಿನ ಮೇಲೆ ಸ್ಥಳೀಯರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದರೆ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ. ಗುಂಪಿನಲ್ಲಿದ್ದ ಉಳಿದವರು ಗುಂಡೇಟಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಥುರಾದ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಒಂದು ಡಜನ್ ಗೂ ಅಧಿಕ ಗೋವುಗಳು ಕಳ್ಳತನವಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Advertisement