ಚತ್ತೀಸ್ ಗಡದಲ್ಲಿ ಇಬ್ಬರು ನಕ್ಸಲರ ಎನ್ ಕೌಂಟರ್

ಚತ್ತೀಸ್ ಗಡದ ಬಿಜಾಪುರ್ ಜಿಲ್ಲೆಯಲ್ಲಿರುವ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಇಬ್ಬರು ನಕ್ಸಲರನ್ನು ಭದ್ರತಾ ಸಿಬ್ಬಂದಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ರಾಯ್ ಪುರ್: ಮಹಿಳೆ ಸೇರಿ ಇಬ್ಬರು ನಕ್ಸಲರನ್ನು ಭದ್ರತಾ ದಳ ಶನಿವಾರ ಬೆಳಿಗ್ಗೆ ಎನ್ ಕೌಂಟರ್ ಮಾಡಿದೆ.
ಚತ್ತೀಸ್ ಗಡದ ಬಿಜಾಪುರ್ ಜಿಲ್ಲೆಯಲ್ಲಿರುವ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಇಬ್ಬರು ನಕ್ಸಲರನ್ನು ಭದ್ರತಾ ಸಿಬ್ಬಂದಿ ಎನ್ ಕೌಂಟರ್ ಮಾಡಿದ್ದಾರೆ.
ಸಿಆರ್ ಪಿಎಫ್ 85ನೇ ಬೆಟಾಲಿಯನ್ ಮತ್ತು ಗಂಗಲೂರ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿರಬೇಕಾದರೆ ನಕ್ಸಲರು ಗುಂಡು ಹಾರಿಸಿದ್ದಾರೆ. ಪ್ರತಿ ದಾಳಿ ನಡೆಸಿದ ಪೊಲೀಸರು ಮತ್ತು ಸಿಆರ್ ಪಿಎಫ್ ದಳ ಇಬ್ಬರು ನಕ್ಸಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
ಸ್ಥಳದಿಂದ ನಕ್ಸಲರು ಬಳಸುತ್ತಿದ್ದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ನಕ್ಸಲರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com