

ನವದೆಹಲಿ: ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಮುಂದಿನ ಎಲ್ಲಾ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಲಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಆಗಮಿಸಿದರೇ ಬಿಜೆಪಿಗೆ ಕಠಿಣ ಸವಾಲು ಎದುರಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ್ ಅಭಿಪ್ರಾಯ ಪಟ್ಟಿದ್ದಾರೆ.
ಆಂಗ್ಲ ಭಾಷೆಯ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿರುವ ಬಾಬಾರಾಮ್ ದೇವ್ ಪ್ರಿಯಾಂಕಾ ಶಕ್ತಿಯ ಬಗ್ಗೆ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಂದಾಳತ್ವ ವಹಿಸಿದರೇ ಬಿಜೆಪಿಗೆ ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮಗೆ ಮಾಡಿರುವ ಅನ್ಯಾಯವನ್ನು ತಾನು ಯಾವತ್ತೂ ಮರೆಯುವುದಿಲ್ಲ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.