ಬಿಜೆಪಿ ಸಂಸದ ಮನೋಜ್ ತಿವಾರಿ, ಇತರ 4 ವಿರುದ್ಧ ಜಾಮೀನು ರಹಿತ ವಾರಂಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಮನೋಜ್ ತಿವಾರಿ, ಸಚಿವರಾದ ಶಿವಪಾಲ್...
ಮನೋಜ್ ತಿವಾರಿ
ಮನೋಜ್ ತಿವಾರಿ
ಭದೋಹಿ(ಉತ್ತರ ಪ್ರದೇಶ): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಮನೋಜ್ ತಿವಾರಿ, ಸಚಿವರಾದ ಶಿವಪಾಲ್ ಯಾದವ್, ಹಾಗೂ ಪ್ರಶಾಂತ್ ಯಾದವ್ ಸೇರಿದಂತೆ ಐವರ ವಿರುದ್ಧ ಸ್ಥಳೀಯ ಕೋರ್ಟ್ ಶನಿವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಸತ್ಯವಾನ್ ಸಿಂಗ್ ಅವರು, 2009ರ ಲೋಕಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದ ತಿವಾರಿ, ಶಿವಪಾಲ್, ಪ್ರಶಾಂತ್, ಸಮಾಜವಾದಿ ಪಕ್ಷದ ಶಾಸಕರಾದ ಜಹಿದಿ ಬೇಗ್ ಹಾಗೂ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ಆರಿಫ್ ಸಿದ್ದಿಖಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದಾರೆ.
ಈ ಐವರು ಆರೋಪಿಗಳನ್ನು ಜೂನ್ 14 ರಂದು ಕೋರ್ಟ್ ಗೆ ಹಾಜರುಪಡಿಸುವಂತೆ ನ್ಯಾ.ಸತ್ಯವಾನ್ ಸಿಂಗ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ,
ಪ್ರಕರಣ ಸಂಬಂಧ ಈ ಐವರು ಆರೋಪಿಗಳು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com