2 ಗಂಟೆಗಿಂತ ಹೆಚ್ಚು ವಿದ್ಯುತ್ ಕಡಿತವಾದರೆ ಪರಿಹಾರ ಕೊಡ್ತಾರಂತೆ ಕೇಜ್ರಿವಾಲ್!

ನವದೆಹಲಿಯಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 

ನವದೆಹಲಿ: ದೆಹಲಿಯಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದೆ.
ವಿದ್ಯುತ್ ವ್ಯತ್ಯಯದಿಂದ ಜನರಿಗೆ ಉಂಟಾಗುವ ಸಮಸ್ಯೆಯನ್ನು ಕಡಿಮೆ ಮಾಡಲು ಕೇಜ್ರಿವಾಲ್ ಸರ್ಕಾರ ಕ್ರಮ ಕೈಗೊಂಡಿದ್ದು, ದಿನಕ್ಕೆ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ವಿದ್ಯುತ್ ಕಡಿತಗೊಳಿಸುವಂತಿಲ್ಲ ಎಂದು ದೆಹಲಿ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸೂಚನೆ ನೀಡಿದ್ದು, ಒಂದು ವೇಳೆ ಎರಡು ಗಂತೆಗಿಂತಲೂ ಹೆಚ್ಚು ಸಮಯ ವಿದ್ಯುತ್ ಕಡಿತವಾದರೆ ಜನರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. 
ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ವಿದ್ಯುತ್ ಕಡಿತಗೊಳಿಸಿದರೆ ದೆಹಲಿಗೆ ವಿದ್ಯುತ್ ಪೂರೈಕೆ ಮಾಡುವ ಕಂಪನಿಗLige ಕಾರಣ ಕೇಳಿ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com