ನೀಟ್ ಸುಗ್ರೀವಾಜ್ಞೆಗೆ ಸಹಿ ಹಾಕಬೇಡಿ: ರಾಷ್ಟ್ರಪತಿಗಳಿಗೆ ಕೇಜ್ರಿವಾಲ್ ಒತ್ತಾಯ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ...
Updated on: 
ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಏಕೀಕೃತ ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್'ಅನ್ನು ಒಂದು ವರ್ಷಗಳ ಕಾಲ ಮುಂದೂಡುವುದಕ್ಕಾಗಿ ಕೇಂದ್ರ ಸರ್ಕಾರ ಶುಕ್ರವಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಸಹಿ ಹಾಕಬೇಡಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. 
ನೀಟ್ ಪರೀಕ್ಷೆಯನ್ನು ಒಂದು ವರ್ಷಗಳ ಕಾಲ ಮುಂದೂಡುವುದಕ್ಕಾಗಿ ಕೇಂದ್ರ ಸರ್ಕಾರ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿರುವುದಕ್ಕೆ ರಾಷ್ಟ್ರಪತಿಗಳು ಸಹಿ ಹಾಕಬಾರದು ಎಂದು ನಾನು ಆಗ್ರಹಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 
ಸುಪ್ರೀಂಕೋರ್ಟ್ ಆದೇಶದ ವಿರುದ್ಧವಾಗಿ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ಮುಂದೂಡಿ ಸುಗ್ರೀವಾಜ್ಞೆ ಹೊರಡಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಅಲ್ಲದೇ, ಪರೀಕ್ಷೆ ಹೆಸರಲ್ಲಿ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳನ್ನು ಲೂಟಿ ಮಾಡುತ್ತಿವೆ. ಆದ್ದರಿಂದ ರಾಷ್ಟ್ರಪತಿಗಳು ಸುಗ್ರೀವಾಜ್ಞೆಗೆ ಸಹಿ ಹಾಕಬಾರದು ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ. 
ಇನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕುವ ಮುನ್ನ, ನೀಟ್ ಸುಗ್ರೀವಾಜ್ಞೆ ಕುರಿತು ಕಾನೂನು ಸಲಹೆ ಕೇಳಿದ್ದು, ಕೇಂದ್ರದಿಂದ ಸ್ಪಷ್ಟನೇ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com