ಸರಿಯಾದ ಸಮಯಕ್ಕೆ ಪದವಿ ಪ್ರಮಾಣ ಪತ್ರ ನೀಡಿ, ಇಲ್ಲದಿದ್ದರೆ ಕ್ರಮ ಎದುರಿಸಿ: ವಿವಿಗಳಿಗೆ ಯುಜಿಸಿ ಎಚ್ಚರಿಕೆ

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗಕ್ಕೆ(ಯುಜಿಸಿ)ಗೆ ದೂರುಗಳು ಬರುತ್ತಿದ್ದು, ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಯುಜಿಸಿ ಎಚ್ಚರಿಕೆ ನೀಡಿದೆ.
ಯುಜಿಸಿ
ಯುಜಿಸಿ

ನವದೆಹಲಿ: ಪದವಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯಲ್ಲಿ ವಿಳಂಬ ಉಂಟಾಗುತ್ತಿರುವುದರ ಬಗ್ಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗಕ್ಕೆ(ಯುಜಿಸಿ)ಗೆ ದೂರುಗಳು ಬರುತ್ತಿದ್ದು, ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಯುಜಿಸಿ ಎಚ್ಚರಿಕೆ ನೀಡಿದೆ.
ಎಲ್ಲಾ ವಿವಿಗಳ ಕುಲಪತಿಗಳಿಗೆ ಪತ್ರ ಬರೆದಿರುವ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ, ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಿ, ಇಲ್ಲವೇ ಕಠಿಣ ಕ್ರಮವನ್ನು ಎದುರಿಸಿ ಎಂದು ಎಚ್ಚರಿಕೆ ನೀಡಿದೆ. ಪರೀಕ್ಷೆಗಳ ಫಲಿತಾಂಶ ಬಂದ 180 ದಿನಗಳ ಒಳಗೆ ವಿವಿಗಳು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಬೇಕು ಎಂದು ಕಾಲಮಿತಿ ವಿಧಿಸಿರುವ ಯುಜಿಸಿ, ಇದಕ್ಕಾಗಿ 180 ದಿನಗಳ ಕಾಲಾವಕಾಶ ಸಾಕಷ್ಟಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.
ಪದವಿ ಶಿಕ್ಷಣವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ನೀಡದೇ ಇರುವುದು ಆ ವಿದ್ಯಾರ್ಥಿಯನ್ನು ಅವಕಾಶ ವಂಚಿತನನ್ನಾಗಿಸುವುದಕ್ಕೆ ಕಾರಣವಾಗುತ್ತದೆ. ಪದವಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಯುಜಿಸಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com