ಇತಿಹಾಸ ನಿರ್ಮಿಸಿದ ಇಸ್ರೋ; ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯ ಯಶಸ್ವೀ ಪ್ರಯೋಗ

ದೇಶದ ಬಾಹ್ಯಾಕಾಶ ತಂತ್ರಜ್ಞಾನ ಇತಿಹಾಸದಲ್ಲೇ ದಾಖಲೆಯ ಕ್ಷಣಕ್ಕೆ ಸೋಮವಾರ ಇಸ್ರೋ ಸಾಕ್ಷಿಯಾಗಿದ್ದು, ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಬಾಹ್ಯಾಕಾಶ ನೌಕೆಯನ್ನು ಇಸ್ರೋ ಬೆಳಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯ ಯಶಸ್ವೀ ಪ್ರಯೋಗ (ಎಎನ್ ಐ ಚಿತ್ರ)
ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯ ಯಶಸ್ವೀ ಪ್ರಯೋಗ (ಎಎನ್ ಐ ಚಿತ್ರ)

ಶ್ರೀಹರಿಕೋಟಾ: ದೇಶದ ಬಾಹ್ಯಾಕಾಶ ತಂತ್ರಜ್ಞಾನ ಇತಿಹಾಸದಲ್ಲೇ ದಾಖಲೆಯ ಕ್ಷಣಕ್ಕೆ ಸೋಮವಾರ ಇಸ್ರೋ ಸಾಕ್ಷಿಯಾಗಿದ್ದು, ಇದೇ ಮೊದಲ ಭಾರಿಗೆ ಸ್ವದೇಶಿ ನಿರ್ವಿುತ ಬಾಹ್ಯಾಕಾಶ ನೌಕೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬೆಳಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಅಭಿವೃದ್ಧಿಪಡಿಸಿರುವ ಸುಮಾರು 1.7 ಟನ್ ತೂಕವಿರುವ ಈ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆ (ಆರ್​ಎಲ್ ವಿ-ಟಿಡಿ)ಯನ್ನು ಉಡಾವಣೆ ಮಾಡಲಾಯಿತು. ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿಯೇ ಪೂರ್ವಭಾವಿ ಪರೀಕ್ಷೆ ನಡೆಸಿ, ಅದರ ಕಾರ್ಯಕ್ಷಮತೆ ಮತ್ತು ವಿಮಾನ ನಿಯಂತ್ರಣ ಪರೀಕ್ಷೆಯನ್ನು ನಡೆಸಲಾಗಿದೆ. ಮಾನವರಹಿತ ಬಾಹ್ಯಾಕಾಶ ಯೋಜನೆಗಳಿಗೆ ಈ ನೌಕೆ ಸಹಕಾರಿ ಎಂದು ವಿಜ್ಞಾನಿಗಳು ವಿವರಿಸಿದ್ದು, ಇದು ಅಮೆರಿಕದ ನೌಕೆಗಿಂತ ಆರು ಪಟ್ಟು ಚಿಕ್ಕದಾಗಿದೆ.

ಪರೀಕ್ಷೆಯ ಉದ್ದೇಶವೇನು?
ಭಾರತಕ್ಕೇನು ಲಾಭ ?

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com