ನರೇಂದ್ರ ಮೋದಿ
ದೇಶ
ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ನವದೆಹಲಿ: ಸ್ವದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಅಭಿವೃದ್ಧಿಪಡಿಸಿರುವ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆ (ಆರ್ಎಲ್ ವಿ-ಟಿಡಿ)ಯ ಉಡಾವಣೆ ಯಶಸ್ವಿಯಾಗಿದ್ದು, ಇಸ್ರೋ ವಿಜ್ಞಾನಿಗಳ ಶ್ರಮದ ಫಲವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ