ದೆಹಲಿಯಲ್ಲಿ ಏರ್ ಆ್ಯಂಬುಲೆನ್ಸ್ ಪತನ; ಇಬ್ಬರಿಗೆ ಗಾಯ

ಪಾಟ್ನಾದಿಂದ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ದೆಹಲಿ ವಿಮಾನ ನಿಲ್ದಾಣದ ಬಳಿ ಪತನಗೊಂಡಿದ್ದು, ಇಬ್ಬರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ...
ದೆಹಲಿಯಲ್ಲಿ ಏರ್ ಆ್ಯಂಬುಲೆನ್ಸ್ ಪತನ
ದೆಹಲಿಯಲ್ಲಿ ಏರ್ ಆ್ಯಂಬುಲೆನ್ಸ್ ಪತನ
ನವದೆಹಲಿ:  ಪಾಟ್ನಾದಿಂದ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ದೆಹಲಿ ವಿಮಾನ ನಿಲ್ದಾಣದ ಬಳಿ ಪತನಗೊಂಡಿದ್ದು, ಇಬ್ಬರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.
ಇಲ್ಲಿನ ನಜಾಫ್‌ಗಢದಲ್ಲಿ ಮಂಗಳವಾರ ಈ ಘಟನೆ ಸಂಭವಿಸಿದ್ದು, ವಿಮಾನದಲ್ಲಿ 7 ಮಂದಿ ಇದ್ದರು ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com