ಭಾರತದಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲೇ ಹೆಚ್ಚಾಗಿ ದೌರ್ಜನ್ಯಕ್ಕೊಳಗಾಗುತ್ತಾರೆ: ಸಮೀಕ್ಷಾ ವರದಿ

ಭಾರತದಲ್ಲಿ ಮಹಿಳೆಯರು ಹೆಚ್ಚಾಗಿ ಸಾರ್ವಜನಿಕ ಸ್ಥಳಗಳಲ್ಲೇ ದೌರ್ಜನ್ಯಕ್ಕೊಳಗಾಗುತ್ತಾರೆ ಎಂದು ಆ್ಯಕ್ಷನ್‌ಏಯ್ಡ್ ಯುಕೆ ನಡೆಸಿದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತದಲ್ಲಿ ಮಹಿಳೆಯರು ಹೆಚ್ಚಾಗಿ ಸಾರ್ವಜನಿಕ  ಸ್ಥಳಗಳಲ್ಲೇ ದೌರ್ಜನ್ಯಕ್ಕೊಳಗಾಗುತ್ತಾರೆ ಎಂದು ಆ್ಯಕ್ಷನ್‌ಏಯ್ಡ್ ಯುಕೆ ನಡೆಸಿದ ಸಮೀಕ್ಷೆಯೊಂದು ಬಹಿರಂಗ ಪಡಿಸಿದೆ.
ಈ ಸಮೀಕ್ಷೆಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಐವರು ಮಹಿಳೆಯರಲ್ಲಿ ನಾಲ್ವರು ದೌರ್ಜನ್ಯಕ್ಕೊಳಗಾಗುತ್ತಾರೆ ಎಂದು ಹೇಳಲಾಗಿದೆ.
ದೇಶದಾದ್ಯಂತ ಪ್ರಮುಖ ನಗರಗಳಲ್ಲಿ ವಾಸಿಸುವ 500 ಮಹಿಳೆಯರನ್ನು ಈ ಸಮೀಕ್ಷೆಗೊಳಪಡಿಸಲಾಗಿತ್ತು.
ಇದರಲ್ಲಿ 25- 36 ವಯಸ್ಸಿನ ಮಹಿಳೆಯರಲ್ಲಿ ಶೇ. 84 ರಷ್ಟು ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೊಳಗಾಗುತ್ತಾರೆ. ಇದರಲ್ಲಿ ಉದ್ಯೋಗಸ್ಥ ಮಹಿಳೆ ಮತ್ತು ವಿದ್ಯಾರ್ಥಿನಿಯರೇ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಾರೆ ಎಂದು ಈ ಸಮೀಕ್ಷೆಯಲ್ಲಿ ಹೇಳಲಾಗಿದೆ. 
ಏತನ್ಮಧ್ಯೆ , ಯುಕೆ ಮಾರ್ಕೆಟ್ ರಿಸರ್ಚ್ ಸಂಸ್ಥೆಯಾದ YouGov ಈ ತಿಂಗಳಾರಂಭದಲ್ಲಿ ನಡೆಸಿದ ಆನ್‌ಲೈನ್ ಸಮೀಕ್ಷೆಯೊಂದರಲ್ಲಿ ನವದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಕೊಲ್ಕಾತ್ತಾದಂಥಾ ಮಹಾ ನಗರಗಳಲ್ಲಿ  ರಸ್ತೆ, ಪಾರ್ಕ್, ಕಾಲೇಜು ಕ್ಯಾಂಪಸ್ ಮತ್ತು ಸಾರ್ವಜನಿಕ ಸಾರಿಗೆ ಸಂಪರ್ಕ ವಾಹನಗಳಲ್ಲಿ ಮಹಿಳೆಯರು ಹೆಚ್ಚು ದೌರ್ಜನ್ಯಕ್ಕೊಳಪಡುತ್ತಾರೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com