ಅಸ್ಸಾಂ ಮುಖ್ಯಮಂತ್ರಿಯಾಗಿ ಸರ್ಬಾನಂದ ಸೊನೊವಾಲ್ ಪ್ರಮಾಣ

ಅಸ್ಸಾಂನಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸರ್ಬಾನಂದ ಸೊನೊವಾಲ್ ಅವರು...
ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸರ್ಬಾನಂದ ಸೊನೊವಾಲ್
ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸರ್ಬಾನಂದ ಸೊನೊವಾಲ್
ಗುವಾಹಟಿ: ಅಸ್ಸಾಂನಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸರ್ಬಾನಂದ ಸೊನೊವಾಲ್ ಅವರು ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
ಖಾನಪರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸರ್ಬಾನಂದ ಸೊನೊವಾಲ್ ಪ್ರಮಾಣ ಸ್ವೀಕರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಧಾರ್ಮಿಕ ಗುರು ರವಿಶಂಕರ ಗುರೂಜಿ, ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ರಾಜಸ್ಥಾನ ಸಿಎಂ ವಸುಂಧರ ರಾಜೆ, ಚತ್ತೀಸ್ ಗಢದ ಮುಖ್ಯಮಂತ್ರಿ ರಮಣ್ ಸಿಂಗ್ ಹಾಗೂ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಪಾಲ್ಗೊಂಡಿದ್ದರು. ಅಸ್ಸಾಂ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ತರುಣ್ ಗೋಗಯ್ ಅವರು ಭಾಗವಹಿಸಿದ್ದರು.
ಅಸ್ಸಾಂನಲ್ಲಿ ಬಿಜೆಪಿ ಗೆಲವು ಸಾಧಿಸಿದ ನಂತರ ಸರ್ಬಾನಂದ ಅವರು ಕೇಂದ್ರ ರಾಜ್ಯ ಕ್ರೀಡಾ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಿಜೆಪಿ, ಅಸೊಮ್ ಗಾನ ಪರಿಷದ್(ಎಜಿಪಿ) ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್(ಬಿಪಿಎಫ್)ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿ, 126೨ ಸ್ಥಾನಗಳ ಪೈಕಿ 86 ಸ್ಥಾನಗಳಲ್ಲಿ ಜಯಗಳಿಸಿ ಬಹುಮತ ಸಾಧಿಸಿತ್ತು. 
ಸೊನೊವಾಲ್ ಗುವಾಹಟಿ ವಿವಿಯಲ್ಲಿ ಪತ್ರಿಕೋದ್ಯಮ ಪದವಿ, ದಿಬ್ರುಘಢ ವಿವಿಯಲ್ಲಿ ಕಾನೂನು ಪದವಿಯನ್ನು ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com