
ನವದೆಹಲಿ: ಅಕ್ರಮ ಶಸ್ತ್ರಾಸ್ತ್ರಗಳ ತರಬೇತಿ ನೀಡುತ್ತಿರುವ ಬಜರಂಗದಳ ಸಂಘಟನೆಯ ಕಾರ್ಯಕರ್ತರ ವಿರುದ್ಧ ಅಯೋಧ್ಯೆಯ ಕೂತವಾಲಿ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಅಯೋಧ್ಯೆಯಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಇತ್ತೀಚೆಗೆ ಶಸ್ತ್ರಾಸ್ತ್ರ ಬಳಕೆಗೆ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಸುಲ್ತಾನ್ ಪುರ, ಗೋರಖ್ ಪುರ, ಫಿಲಿಬಿಟ್, ನೊಯ್ಡಾ ಹಾಗೂ ಫತೇಪುರದಲ್ಲಿ ಜೂನ್ 5ರವರೆಗೆ ಇದೇ ರೀತಿಯ ಶಿಬಿರಗಳು ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಬಜರಂಗ ದಳದ ಕಾರ್ಯಕರ್ತರು ಬಂದೂಕು, ಕತ್ತಿ ಮತ್ತು ಲಾಠಿಗಳನ್ನು ಬೀಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ವೈರಲ್ ಆಗಿತ್ತು.
ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆಯೇ ಈ ರೀತಿಯಾಗಿ ಶಸ್ತ್ರಾಸ್ತ್ರ ಬಳಕೆ ಮಾಡಿ ತರಬೇತಿ ನೀಡುತ್ತಿರುವುದರ ವಿರುದ್ಧ ಕೆಲವು ಸಂಘಟನೆಗಳು ಹಾಗೂ ರಾಜರಕೀಯ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದೀಗ ಬಜರಂಗ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Advertisement