
ಕೋಲ್ಕತಾ: ಸಾಲು ಸಾಲು ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ, "ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಪಶ್ಚಿಮ ಬಂಗಾಳದ ಶಾಸಕರಿಂದ ಸ್ಟ್ಯಾಂಪ್ ಪೇಪರ್ ಮೇಲೆ ಬರೆಸಿಕೊಳ್ಳುತ್ತಿದೆ.
ಅಭದ್ರ ಸ್ಥಿತಿಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ, ಪಶ್ಚಿಮ ಬಂಗಾಳದಲ್ಲಿ ಇಂಥದ್ದೊಂದು ಅಭಿಯಾನ ಪ್ರಾರಂಭಿಸಿದ್ದು, ರಾಜ್ಯದಲ್ಲಿ ನೂತನವಾಗಿ ಆಯ್ಕೆಗೊಂಡ ಶಾಸಕರಿಂದ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಸ್ಟ್ಯಾಂಪ್ ಪೇಪರ್ ಮೇಲೆ ಬರೆ
ಸುತ್ತಿದೆ. ಆಂಗ್ಲ ಮಾಧ್ಯಮವೊಂದು ಪ್ರಕಟಿಸಿರುವುದರ ವರದಿ ಪ್ರಕಾರ, ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ, ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುತ್ತೆವೆ ಎಂದು 100 ರೂಪಾಯಿ ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಆದರೆ ಎರಡೂ ಪಕ್ಷಗಳಿಗೆ ಹೀನಾಯ ಸೋಲುಂಟಾಗಿದೆ. ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವುದರೊಂದಿಗೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದೂ ಕಾಂಗ್ರೆಸ್ ಶಾಸಕರು ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣಮಾಡಬೇಕಿದೆ.
Advertisement