ತಿರುವನಂತಪುರ: ಸಿಪಿಎಂ ನಾಯಕ 72 ವರ್ಷದ ಪಿಣರಾಯಿ ವಿಜಯನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. .ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಪಿ ಸದಾಸಿವಂ ಅವರು ಎಡರಂಗ ನಾಯಕ ಪಿಣರಾಯಿ ವಿಜಯನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು..ಸಮಾರಂಭದಲ್ಲಿ ಪಿಣರಾಯಿ ಮುಖ್ಯಮಂತ್ರಿಯಾಗಿ ಹಾಗೂ 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. .ಕೇರಳದಲ್ಲಿ ಎಡ ಪಕ್ಷಗಳು 91 ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿವೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics