ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾತನಾಡಿ, ಪ್ರಕರಣ ಕುರಿತು ಪ್ರಾರಂಭದಿಂದಲೂ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ನಾವಿಕನಿಗೆ ಜಾಮೀನು ಷರತ್ತನ್ನು ಸಡಿಲಗೊಳಿಸಲು ತನ್ನ ಆಕ್ಷೇಪವಿಲ್ಲ ಎಂಬುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದು ಖಂಡನೀಯ. ಕೇಂದ್ರ ಸರ್ಕಾರ ಈ ರೀತಿ ಹೇಳಿಕೆ ನೀಡಬಾರದಿತ್ತು. ಈ ರೀತಿ ಹೇಳಿಕೆ ನೀಡುವುದರ ಮೂಲಕ ಕೇಂದ್ರ ಸರ್ಕಾರ ತಪ್ಪು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.