ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿಗಳು 'ಸ್ಥಿರವಾಗಿ ಅಸ್ಥಿರತೆ' ಕಾಯ್ದುಕೊಂಡಿದೆ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸ್ಥಿರವಾಗಿ ಅಸ್ಥಿರತೆ ಕಾಯ್ದುಕೊಂಡಿದೆ ಎಂದು ಗುಲಾಂ ನಬಿ ಆಜಾದ್ ಲೇವಡಿ ಮಾಡಿದ್ದಾರೆ.
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಸರ್ಕಾರದ 2 ವರ್ಷಗಳ ಸಾಧನೆಯ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸ್ಥಿರವಾಗಿ ಅಸ್ಥಿರತೆ ಕಾಯ್ದುಕೊಂಡಿದೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯಸಭೆಯ ವಿಪಕ್ಷನಾಯಕರಾಗಿರುವ ಗುಲಾಂ ನಬಿ ಆಜಾದ್, ಚೀನಾ- ಪಾಕಿಸ್ತಾನದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸ್ಥಿರವಾಗಿ ಅಸ್ಥಿರತೆ ಕಾಯ್ದುಕೊಂಡಿದೆ. ಎನ್ ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಪಾಕಿಸ್ತಾನ ಸೇನಾ ಪಡೆಗಳಿಂದ ಜಮ್ಮು-ಕಾಶ್ಮೀರದಲ್ಲಿ 1,000 ಕದನವಿರಾಮ ಉಲ್ಲಂಘನೆ ನಡೆದಿದ್ದು ಹಿಂದೆಂದೂ ಈ ರೀತಿಯ ಘಟನೆಗಳು ನಡೆದಿರಲಿಲ್ಲ ಎಂದು ಹೇಳಿದ್ದಾರೆ.
ಇನ್ನು ಗುರ್ದಾಸ್ ಪುರ, ಪಠಾಣ್ ಕೋಟ್ ವಾಯು ನೆಲೆ ಮೇಲಿನ ಉಗ್ರ ದಾಳಿಗಳು ಕೇಂದ್ರ ಸರ್ಕಾರದ 2 ವರ್ಷಗಳ ವಿದೇಶಾಂಗ ನೀತಿಯ ಫಲ ಎಂದು ಗುಲಾಂ ನಬಿ ಆಜಾದ್ ಮೋದಿ ಸರ್ಕಾರದ ವಿದೇಶಾಂಗ ನೀತಿಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com