ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಎರಡನೇ ವಾರ್ಷಿಕೋತ್ಸವ ಕುರಿತು ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ' ನರೇಂದ್ರ ಮೋದಿ ಸರ್ಕಾರ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಹೊಸ ಮಾನದಂಡನೆಗಳನ್ನು ಸ್ಥಾಪಿಸಿದೆ ಎಂದು ಹೇಳಿದ್ದಾರೆ.
ನಮ್ಮ ಸಚಿವರು ತಮ್ಮ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರವನ್ನಾಗಿಸಿದ್ದಾರೆ. ಈ ಮೂಲಕ ಭಾರತ ಮತ್ತಷ್ಟು ಮೇಲಕ್ಕೇರಿದೆ ಎಂದು ತಿಳಿಸಿದ್ದಾರೆ.
ಎಲ್ಲರ ಜೊತೆ ಜೊತೆಯಾಗಿ ಎಲ್ಲವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ. ಅಭಿವೃದ್ಧಿ ಮತ್ತು ಪ್ರಗತಿಗಾಗಿ ಸರ್ಕಾರ ಹೊಸ ಮಾನದಂಡನೆಗಳನ್ನು ಸ್ಥಾಪಿಸಿದೆ ಎಂದು ಅವರು ಶ್ಲಾಘಿಸಿದ್ದಾರೆ.