ಬಿಜೆಪಿ ನಿರ್ಣಾಯಕ ಸರ್ಕಾರ ನೀಡಿದೆ: ಅಮಿತ್ ಶಾ

ಕೇಂದ್ರದಲ್ಲಿ ಬಿಜೆಪಿ ನಿರ್ಣಾಯ ಸರ್ಕಾರವನ್ನು ನೀಡಿದ್ದು, ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಮುಂದಿನ ಮೂರು...
ಅಮಿತ್ ಶಾ
ಅಮಿತ್ ಶಾ
Updated on: 
ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನಿರ್ಣಾಯ ಸರ್ಕಾರವನ್ನು ನೀಡಿದ್ದು, ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಈಡೇರಿಸುವುದಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ ಬಿಜೆಪಿ ಅಧ್ಯಕ್ಷ, ಮೋದಿ ಸರ್ಕಾರ ಜನಸ್ನೇಹಿಯಾಗಿರುವ ಜತೆಗೆ ಭ್ರಷ್ಟಾಚಾರ ಮುಕ್ತ ಎಂಬ ಗೌರವಕ್ಕೂ ಪಾತ್ರವಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಸುಧಾರಣೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ನಮ್ಮ ಕ್ಯಾಬಿನೆಟ್​ನಲ್ಲಿರುವ ಸಚಿವರು ಜನರ ನಾಡಿಮಿಡಿತವನ್ನು ಅರಿತಿದ್ದಾರೆ. ಇದೇ ರೀತಿ ಮುಂದಿನ ಮೂರು ವರ್ಷ ಕೂಡ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಭಿವೃದ್ಧಿ ಪಥದತ್ತ ನಮ್ಮ ನಡೆ ಸಾಗಲಿದೆ ಎಂದರು.
ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಮೋದಿ ಸರ್ಕಾರವನ್ನು ಇಕ್ಕಿಟ್ಟಿಗೆ ಸಿಲುಕಿಸಲು ವಿರೋಧ ಪಕ್ಷ ಹೊಂಚು ಹಾಕುತ್ತಿದೆ. ಆದರೆ ನಾವು ಅದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಮುಂದಿನ ಹದಿನೈದು ದಿನಗಳನ್ನು ‘ವಿಕಾಸ ಪರ್ವ’ ಎಂದು ಆಚರಿಸಲಾಗುತ್ತದೆ. ಇದಕ್ಕಾಗಿ 30 ತಂಡಗಳನ್ನು ರೂಪಿಸಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com