
ಶ್ರೀನಗರ: ಕಾಶ್ಮೀರದ ಬಾರಮುಲ್ಲಾದ ಕಂಚಿಪೋರದಲ್ಲಿ ನಡೆಯುತ್ತಿದ್ದ ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ.
ಕಂಚಿಪೋರ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಯೋಧರು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ಆರಂಭಗೊಂಡಿತ್ತು.
ಇದರಂತೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದ ಭಾರತೀಯ ಯೋಧರು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ವೇಳೆ ಯೋಧನೊಬ್ಬ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
Advertisement