
ನವದೆಹಲಿ: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಡೆದ ನೈಜೀರಿಯಾ ಮೂಲದ ಯುವತಿ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಸೂಚನೆ ನೀಡಿದೆ.
ಮೇ.23 ರಂದು ಪಾರ್ಕಿಂಗ್ ಕಾರಣಕ್ಕಾಗಿ ಹೈದರಾಬಾದ್ ನ ಸ್ಥಳೀಯರು ನೈಜೀರಿಯಾ ಮೂಲದ 23 ವರ್ಷದ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ, ಮನಬಂದಂತೆ ಥಳಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆಂದು ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಟ್ವಿಟರ್ ನಲ್ಲಿ ಹೇಳಿದ್ದಾರೆ.
Advertisement