ಕಾಶ್ಮೀರ ಗುಂಡಿನ ಕಾಳಗದಲ್ಲಿ 6 ಉಗ್ರರ ಹತ್ಯೆ, ಓರ್ವ ಸೈನಿಕ ಸಾವು

ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಹಾಗೂ ಕುಪ್ವಾರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹತ್ಯೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಹಾಗೂ ಕುಪ್ವಾರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಸೈನಿಕ ಸಹ ಮೃತಪಟ್ಟಿದ್ದಾರೆ ಮತ್ತು ಮತ್ತೊರ್ವ ಗಾಯಗೊಂಡಿದ್ದಾರೆ.
ಬಾರಮುಲ್ಲಾ ಜಿಲ್ಲೆಯ ಕಂಚಿಪೋರ ಗ್ರಾಮದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಯೋಧರು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಭಾರ ಗುಂಡಿನ ಚಕಮಕಿ ನಡೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ ಕಾರ್ಯಾಚರಣೆ ವೇಳೆ ಯೋಧನೊಬ್ಬ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಕುಪ್ವಾರ ಜಿಲ್ಲೆಯ ತೂಟ್ ಮಾರ್ ಗಲಿಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ಬಳಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಯೋಧನೊಬ್ಬ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com