ಮೋದಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಎಂಬ ಭಾವನೆಯನ್ನು ಬದಲಾಯಿಸಿದ್ದೇವೆ: ನಜ್ಮಾ ಹೆಫ್ತುಲ್ಲಾ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂಬ ಭಾವನೆಯನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ
ನಜ್ಮಾ ಹೆಫ್ತುಲ್ಲಾ
ನಜ್ಮಾ ಹೆಫ್ತುಲ್ಲಾ

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂಬ ಭಾವನೆಯನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಕೇಂದ್ರ ಅಲ್ಪಸಂಖ್ಯಾತ ಇಲಾಖೆ ಖಾತೆ ಸಚಿವೆ ನಜ್ಮಾ ಹೆಫ್ತುಲ್ಲಾ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಯೋಜನೆಗಳನ್ನು ಪ್ರಕಟಿಸಿದ್ದು, ಲೋಕಸಭಾ ಚುನಾವಣೆ ವೇಳೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿದ್ದ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದು  ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಅಗಿರಲಿದೆ ಎಂಬ ಭಯವಿತ್ತು. ಅಂತಹ ಸಂದರ್ಭದಲ್ಲಿ ಇಲಾಖೆಯ ಜವಾಬ್ದಾರಿ ವಹಿಸಿಕೊಳ್ಳುವುದು ಸವಾಲಿನ ವಿಷಯವಾಗಿತ್ತು. ಆದರೆ 2 ವರ್ಷಗಳಲ್ಲಿ ಅಂತಾರಾಷ್ಟ್ರೀಯ ಭಾವನೆಯನ್ನು ಬದಲಾಯಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ನಜ್ಮಾ ಹೆಫ್ತುಲ್ಲಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 2 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ನಜ್ಮಾ ಹೆಫ್ತುಲ್ಲಾ, ಅಲ್ಪಂಸಖ್ಯಾತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ನಯಿ ಮಂಜಿಲ್, ಸೀಖೋ ಔರ್ ಕಮಾವೋ ಉಸ್ತಾದ್ ಹಾಗೂ ಹಮಾರಿ ಧರೋಹರ್ ಎಂಬ ಯೋಜನೆಗಳನ್ನು ಘೋಷಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳಿಗೆ ಶೇ.10 ಹಣ ನೀದಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮದರಸಾಗಳ ಅಭಿವೃದ್ಧಿಗಾಗಿ ನಯಿ ಮಂಜಿಲ್ ಎಂಬ ಯೋಜನೆ ಜಾರಿಗೊಳಿಸಲಾಗಿದ್ದು ಯೋಜನೆಯಡಿ 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com