

ಪಠಾಣ್ ಕೋಟ್: ಪಂಜಾಬ್ ನ ಪಠಾಣ್ ಕೋಟ್ ನಲ್ಲಿನ ಸೇನಾ ಕ್ಯಾಂಪ್ ವೊಂದರಲ್ಲಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯೋಧನಿಗೆ 2 ಮಗ ಹಾಗೂ ಓರ್ವ ಮಗಳಿದ್ದು, ಇವರು ಬಿಹಾರ ಮೂಲದವರಾಗಿದ್ದಾರೆಂದು ತಿಳಿದುಬಂದಿದೆ. ಭಾರತೀಯ ಸೇನೆಯಲ್ಲಿ ಕಳೆದ 14 ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದ ಈ ಯೋಧ ಆದಾವ ಕಾರಣಕ್ಕೋ ಏನೋ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಇನ್ನು ಯೋಧನ ಆತ್ಮಹತ್ಯೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಸ್ಥಳೀಯ ನ್ಯಾಯಾಲಯ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.