
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ.4 ರಿಂದ 5 ರಾಷ್ಟ್ರಗಳ( ಅಫ್ಘಾನಿಸ್ತಾನ್, ಕತಾರ್, ಸ್ವಿಟ್ಜರ್ ಲ್ಯಾಂಡ್, ಅಮೆರಿಕ ಹಾಗೂ ಮೆಕ್ಸಿಕೋ) ಪ್ರವಾಸ ಕೈಗೊಳ್ಳಲಿದ್ದಾರೆ.
ಅಫ್ಘಾನಿಸ್ತಾನಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ನೀಡಿರುವ ಸುಮಾರು 1,400 ಕೋಟಿ ನೆರವಿನಿಂದ ನಿರ್ಮಿಸಿರುವ ಸಲ್ಮಾ ಅಣೆಕಟ್ಟನ್ನು ಉದ್ಘಾಟನೆ ಮಾಡಲಿದ್ದಾರೆ. ಅಫ್ಘಾನಿಸ್ತಾನ ಭೆಟಿಯ ನಂತರ ಕತಾರ್ ಹಾಗೂ ಸ್ವಿಟ್ಜರ್ ಲ್ಯಾಂಡ್ ಗೆ ಭೇಟಿ ನೀಡಲಿದ್ದಾರೆ.
ಯಥೇಚ್ಛ ಇಂಧನ ಸಂಪನ್ಮೂಲಗಳನ್ನು ಹೊಂದಿರುವ ಕತಾರ್ ಗೆ ಎರಡು ದಿನಗಳ ಭೇಟಿ ನೀಡಲಿರುವ ಪ್ರಧಾನಿ ಮೋದಿ, ತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಮುಖವಾಗಿ ಹೈಡ್ರೋಕಾರ್ಬನ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ. ಬಳಿಕ ಸ್ವಿಟ್ಜರ್ ಲ್ಯಾಂಡ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಿಟ್ಜರ್ ಲ್ಯಾಂಡ್ ನ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು ಕಪ್ಪುಹಣದ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ ಎಂಬ ನಿರೀಕ್ಷೆ ಇದೆ. ಸ್ವಿಟ್ಜರ್ ಲ್ಯಾಂಡ್ ಗೆ ಭೇಟಿ ನೀಡಿದ ಬಳಿಕ ಅಮೆರಿಕಾಗೆ ಭೇಟಿ ನೀಡಲಿರುವ ಮೋದಿ ಅಲ್ಲಿನ ಸಂಸತ್ ನ್ನುದ್ದೇಶಿಸಿ ಮಾತನಾಡಲಿದ್ದಾರೆ.
Advertisement