ಪೊಲೀಸ್, ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಲಿಕ್ಕರ್ ಮಾಫಿಯಾ

ಪೊಲೀಸರು ಮತ್ತು ಪತ್ರಕರ್ತರ ಮೇಲೆ ಲಿಕ್ಕರ್ ಮಾಫಿಯಾದವರು ದಾಳಿ ಮಾಡಿರುವ ಘಟನೆ ಮಧ್ಯಪ್ರದೇಶದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಸಾತ್ನ: ಪೊಲೀಸರು ಮತ್ತು ಪತ್ರಕರ್ತರ ಮೇಲೆ ಲಿಕ್ಕರ್ ಮಾಫಿಯಾದವರು ದಾಳಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಾತ್ನ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ. 
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿ ಸ್ಥಳೀಯ ನಿವಾಸಿ ಶಿವಕುಮಾರ್ ಅವರನ್ನು ಮದ್ಯ ದಂಧೆಕೋರರು ಗನ್ ತೋರಿಸಿ ಅಪಹರಿಸಿದ್ದರು. 
ಈ ವಿಷಯ ತಿಳಿದ ಮಾಧ್ಯಮದವರು ಘಟನೆ ಬಗ್ಗೆ ವರದಿ ಮಾಡಲು ತೆರಳಿದ್ದರು, ಈ ವೇಳೆ ಮಾಫಿಯಾದವರು ವರದಿಗಾರರು ಮತ್ತು ಕ್ಯಾಮೆರಾಮ್ಯಾನ್ ಮೇಲೆ ಕಲ್ಲು ತೂರಾಟ ನಡೆಸಿ, ಕೋಲುಗಳಿಂದ ಬಡಿದಿದ್ದಾರೆ. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ ಮಾಡಿದ್ದಾರೆ. 
ಘಟನೆಯಲ್ಲಿ ಕೆಲವು ಮಾಧ್ಯಮದವರು ಮತ್ತು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಆರು ಮಂದಿ ತಲೆಮರೆಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com