ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಅಡ್ಮಿರಲ್ ಸುನಿಲ್ ಲಂಬಾ
ದೇಶ
ನೌಕಾಪಡೆಯ ಮುಖ್ಯಸ್ಥರಾಗಿ ಸುನಿಲ್ ಲಂಬಾ ಅಧಿಕಾರ ಸ್ವೀಕಾರ
ಭಾರತೀಯ ನೌಕಾಪಡೆಯ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ಸುನಿಲ್ ಲಂಬಾ ಅವರು ಮಂಗಳವಾರ ಅಧಿಕಾರ...
ನವದೆಹಲಿ: ಭಾರತೀಯ ನೌಕಾಪಡೆಯ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ಸುನಿಲ್ ಲಂಬಾ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮೊದಲಿದ್ದ ಅಡ್ಮಿರಲ್ ಆರ್.ಕೆ. ಧವನ್ ಅವರು ನಿವೃತ್ತಿಯಾಗುತ್ತಿದ್ದು, ಸುನಿಲ್ ಲಂಬಾ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಇಂದು ಅಧಿಕಾರ ಸ್ವೀಕರಿಸಿದ ಲಂಬಾ ಅರು ಮೇ 31, 2019ರವರೆಗೆ ಕಾರ್ಯನಿರ್ವಹಿಸಲಿದ್ದಾರೆ.
58 ವರ್ಷದ ಲಂಬಾ ಅವರು ಪಶ್ಚಿಮ ನೌಕಾದಳದ ಫ್ಲ್ಯಾಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸಿದ್ದು, 1978ರಲ್ಲಿ ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನೇಮಕಗೊಂಡಿದ್ದರು. ತದ ನಂತರ ನೌಕಾದಳದ ವಿವಿಧ ಭಾಗಗಳಲ್ಲಿ ಉನ್ನತ ಸ್ಥಾನ ಅಲಂಕರಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ