ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸ್ವಚ್ಛ ಭಾರತ ಅಭಿಯಾನದ ಇಬ್ಬರು ಅಧಿಕಾರಿಗಳ ಬಂಧನ

ಸ್ವಚ್ಛ ಭಾರತ ಅಭಿಯಾನಕ್ಕೆ ಮೀಸಲಿರಿಸಿದ್ದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಅಭಿಯಾನದ ಇಬ್ಬರು...
ಗುರ್ಗಾಂವ್: ಸ್ವಚ್ಛ ಭಾರತ ಅಭಿಯಾನಕ್ಕೆ ಮೀಸಲಿರಿಸಿದ್ದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಅಭಿಯಾನದ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ. 
ತಾತ್ಕಾಲಿಕ ಹೆಚ್ಚುವರಿ ಅಧಿಕಾರಿಗಳಾದ ಪ್ರವೀಣ್ ಕುಮಾರ್ ಮತ್ತು ಪರ್ವೇಶ್ ಶರ್ಮಾ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ ಸ್ವಚ್ಛ ಭಾರತ ಅಭಿಯಾನದ ಪ್ರಾಜೆಕ್ಟ್ ಕೊ ಅರ್ಡಿನೇಟರ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಪರ್ವೇಶ್ ಶರ್ಮಾ ಯೋಜನೆಯ ಆಕೌಂಟ್ ಅಸಿಸ್ಟೆಂಟ್ ಕೆಲಸ ಮಾಡುತ್ತಿದ್ದರು. ಸ್ವಚ್ಛ ಭಾರತ ಅಭಿಯಾನದ ಹಣವನ್ನು ಇನ್ನು ಇಬ್ಬರು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ಕಮಲ್ ಮತ್ತು ಸುರೇಂದ್ರ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಈ ನಾಲ್ವರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಕಲಿ ಫಲಾನುಭವಿಗಳ ಪಟ್ಟಿಯನ್ನು ಸೃಷ್ಟಿಸಿ, 285 ಖಾತೆಗಳ ನೀಡಿದ್ದರು. ಆ ಖಾತೆಗಳಿಗೆ ಹಣ ಜಮೆಯಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಸ್ವಚ್ಛ ಭಾರತ ಅಭಿಯಾನದ ಅಡಿ ಹಣ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಕೆಲವು ಗ್ರಾಮಸ್ಥರು ಈ ಯೋಜನೆಯಡಿ ಹಣವನ್ನು ಪಡೆದಿದ್ದಾರೆ. ಆದರೆ ಈ ನಾಲ್ವರು ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಖಾತೆಗಳಿಗೆ ಹಣವನ್ನು ಜಮೆ ಮಾಡಿಸಿಕೊಂಡಿದ್ದಾರೆ. 
ಗ್ರಾಮಸ್ಥರೊಬ್ಬರ ಹೆಸರಿನಲ್ಲಿ ಶೌಚೌಲಯ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ. ಆದರೆ, ಅವರು ತಮ್ಮ ಖಾತೆಗೆ ಯಾವುದೇ ಹಣ ಬಂದಿಲ್ಲ ಎಂದು ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ತನಿಖೆ ನಡಿಸಿದಾಗ ಈ ಹಗರಣ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com