ರಾಹುಲ್ ಗಾಂಧಿ
ರಾಹುಲ್ ಗಾಂಧಿ

ರಾಹುಲ್ ಗೆ ಶೀಘ್ರ ಅಧ್ಯಕ್ಷ ಪಟ್ಟ; ಕಾಂಗ್ರೆಸ್ ಮುಕ್ತ ಭಾರತಕ್ಕೆ ಮತ್ತಷ್ಟು ಸಹಕಾರಿ ಎಂದ ಬಿಜೆಪಿ

ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಯಾವುದೇ ಸಂದರ್ಭದಲ್ಲೂ ರಾಹುಲ್ ಗಾಂಧಿಗೆ...
ನವದೆಹಲಿ: ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಯಾವುದೇ ಸಂದರ್ಭದಲ್ಲೂ ರಾಹುಲ್ ಗಾಂಧಿಗೆ ಪಟ್ಟ ಕಟ್ಟುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ,
ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಬಳಿಕ ರಾಹುಲ್ ಗೆ ಪಟ್ಟಕಟ್ಟಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ,
ಇತ್ತೀಚಿನ ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ಚುನಾವಣೆ ಸೋಲು ಹಾಗೂ ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ. ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ಬದಲಾವಣೆ ಸೇರಿದಂತೆ ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ವರದಿ ಮಾಡಲಾಗಿದೆ.
ಜೈರಾಮ್ ರಮೇಶ್, ಶಶಿ ತರೂರ್ ಹಾಗೂ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಪಕ್ಷದಲ್ಲಿ ಬದಲಾವಣೆಯಾಗಬೇಕಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಪಂಜಾಬ್ ಕಾಂಗ್ರೆಸ್ ನಾಯಕ ಹಾಗೂ ಅಮೃತಸರ ಸಂಸದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು, ಸೋನಿಯಾ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಪಡೆದು ಪಕ್ಷದ ಜವಾಬ್ದಾರಿಯನ್ನು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಗೆ ವಹಿಸಲಿ ಎಂದು ಹೇಳಿದ್ದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಶಹನವಾಜ್ ಹುಸೇನ್ ಅವರು, ರಾಹುಲ್ ಪಕ್ಷದ ಅಧ್ಯಕ್ಷರಾದರೆ ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಮತ್ತಷ್ಟು ಸಹಕಾರಿಯಾಗಲಿದೆ ಎಂದಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com