ಲಾಭದಾಯಕ ಹುದ್ದೆ: 27 ಆಪ್ ಶಾಸಕರಿಗೆ ಚುನಾವಣಾ ಆಯೋಗದಿಂದ ನೋಟಿಸ್

ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಲಾಭದಾಯಕ ಹುದ್ದೆ ಹೊಂದಿರುವ ಆರೋಪ....
ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್
ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್
Updated on: 
ನವದೆಹಲಿ: ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಲಾಭದಾಯಕ ಹುದ್ದೆ ಹೊಂದಿರುವ ಆರೋಪ ಎದುರಿಸುತ್ತಿರುವ ಎಎಪಿಯ 27 ಶಾಸಕರಿಗೆ ಬುಧವಾರ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಲಾಭದಾಯಕ ಹುದ್ದೆ ಅನುಭವಿಸುತ್ತಿರುವ ಆಮ್‌ಆದ್ಮಿ ಪಾರ್ಟಿಯ 27 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಇಂದು ಆಪ್ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 11ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಕಳೆದ ಜೂನ್ ನಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಲಾಭದಾಯಕ ಹುದ್ದೆ ಹೊಂದಿರುವ 27 ಆಪ್ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದರು.
ಎಎಪಿಯ 27 ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ಕೆಲಸ ಮಾಡುತ್ತಿದ್ದು, ಅವರಿಗೆ ಸರ್ಕಾರದಿಂದ ಕಾರು, ಕಚೇರಿ ಮುಂತಾದ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ.
ಇವರು ಸರ್ಕಾರದ ನಿರ್ಣಯಗಳ ಮೇಲೂ ಪ್ರಭಾವ ಬೀರುತ್ತಿರುವುದರಿಂದ  ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇವರಿಗೆ ಅವಕಾಶ ನೀಡಬಾರದು ಮಾತ್ರವಲ್ಲದೆ ಕೂಡಲೇ ಇವರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com