ಮೋದಿ ಆಡಳಿತದಲ್ಲಿ ರೈತರು ಮತ್ತು ಸೈನಿಕರ ಆತ್ಮಹತ್ಯೆ ಪ್ರಕರಣ ಹೆಚ್ಚು: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ರೈತರು ಮತ್ತು ಸೈನಿಕರ ಆತ್ಮಹತ್ಯೆಗಳು ಹೆಚ್ಚೆಚ್ಚು ನಡೆಯುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ..
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ರೈತರು ಮತ್ತು ಸೈನಿಕರ ಆತ್ಮಹತ್ಯೆಗಳು ಹೆಚ್ಚೆಚ್ಚು ನಡೆಯುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಯನ್ನು ಅನುಷ್ಠಾನಗೊಳಿಸದ ಕೇಂದ್ರ ಸರ್ಕಾರ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಯೋಜನೆ ಅನುಪಷ್ಠಾನವಾಗದ ಹಿನ್ನೆಲೆಯಲ್ಲಿ ನಿವೃತ್ತ ಸೈನಿಕ ರಾಮಕೃಷ್ಣ ಗ್ರೇವಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ರೈತರು ಮತ್ತು ಯೋಧರು ಮೋದಿ ರಾಜ್ ನಲ್ಲಿ ಸಾವಿಗೆ ಶರಣಾಗುತ್ತಿದ್ದಾರೆ. ಒಂದು ವೇಳೆ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿಗೆ ತಂದಿದ್ದರೇ, ರಾಮ ಕಿಶನ್ ಗೇವಾಲ್ ಯಾಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ತಮ್ಮ ಹಕ್ಕುಗಳನ್ನ ಪಡೆದುಕೊಳ್ಳಲು ದೇಶದ ಎಲ್ಲಾ ಪ್ರಜೆಗಳಿಗೂ ಸ್ವಾತಂತ್ರ್ಯವಿದೆ ಎಂದ ಅವರು, ಇಂದು ಸಂಜೆ ನಡೆಯುವ ನಿವೃತ್ತ ಯೋಧ ರಾಮ್ ಕಿಶನ್ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.

ಒನ್ ರ್ಯಾಂಕ್ ಒನ್ ಪೆನ್ಷನ್ ವಿಷಯವಾಗಿ 70 ವರ್ಷದ ನಿವೃತ್ತ ಯೋಧ ರಾಮ್ ಕಿಶನ್ ಗ್ರೇವಾಲ್ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com