

ಕೋಲ್ಕತಾ: ಒಆರ್ ಒಪಿ ಗಾಗಿ ಆತ್ಮಹತೆ ಮಾಡಿಕೊಂಡ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರೋಧಿಸಿದ್ದಾರೆ.
ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿರುವುದು ಒಪ್ಪಲು ಸಾಧ್ಯವಿಲ್ಲ. ಒಬ್ಬ ಮುಖ್ಯಮಂತ್ರಿಯನ್ನು ಅವರದ್ದೇ ರಾಜ್ಯದಲ್ಲಿ ಬಂಧಿಸಲಾಗಿದೆ ಇಲ್ಲಿ ಏನಾಗುತ್ತಿದೆ? ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ ರಾಹುಲ್ ಗಾಂಧಿ ಅವರನ್ನು ಆಸ್ಪತ್ರೆ ಬಳಿಯೇ ತಡೆಹಿಡಿಯಲಾಗಿರುವುದನ್ನು ಸಹ ಖಂಡಿಸಿದ್ದರು. ಇದೆ ವೇಳೆ ಒಆರ್ ಒಪಿಗಾಗಿ ಯೋಧ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಮಮತಾ ಬ್ಯಾನರ್ಜಿ ದುರದೃಷ್ಟಕರ ಎಂದು ಹೇಳಿದ್ದಾರೆ.