
ನವದೆಹಲಿ: ಒಆರ್ ಒಪಿಗಾಗಿ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಸೈನಿಕ ರಾಮ್ ಕಿಶನ್ ಗರೆವಾಲ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪೊಲೀಸರು ಎರಡನೇ ಬಾರಿಗೆ ವಶಕ್ಕೆ ಪಡೆದು,
ನಂತರ ಬಿಡುಗಡೆ ಮಾಡಿದ್ದಾರೆ ಎಂಬ ವರದಿ ಪ್ರಕಟವಾಗಿದೆ.
ಮೃತ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ್ದ ರಾಹುಲ್ ಗಾಂಧಿಯನ್ನು ಪೊಲೀಸರು ಎರಡನೇ ಬಾರಿಗೆ ವಶಕ್ಕೆ ಪಡೆದ್ದರು. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪೋಲೀಸರ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ನಾಯಕರಾದ ಜ್ಯೋತಿರಾದಿತ್ಯ ಸಿಂಧಿಯಾ ಅಜಯ್ ಮಕೇನ್ ಸೇರಿದಂತೆ ಇನ್ನು ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರನ್ನು ಆರ್ ಎಂಎಲ್ ಆಸ್ಪತ್ರೆಯ ಗೇಟ್ ಬಳಿಯೇ ತಡೆಡಿದ್ದ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಸುಮಾರು 70 ನಿಮಿಷಗಳ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು.
ಕೇಜ್ರಿವಾಲ್ ಆರೋಪ:
ಇದೆ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ದೆಹಲಿ ಪೋಲೀಸರ ವಿರುದ್ಧ ಆರೋಪ ಮಾಡಿದ್ದು, ಮೃತ ಯೋಧನ ಕುಟುಂಬವನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. " ನನ್ನ ವಾಹನವನ್ನು ಸುತ್ತುವರೆದಿರುವ ಪೊಲೀಸರು ನನಗೆ ಮೃತ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಬಿಡುತ್ತಿಲ್ಲ" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Advertisement