
ಬಿವಾನಿ: ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಯೋಧ ರಾಮ್ ಕಿಶನ್ ಗರೆವಾಲ್ ಅವರ ಸ್ವಗ್ರಾಮಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಸೈನಿಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಹರ್ಯಾಣ ಮೂಲದ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ದೆಹಲಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೆಹಲಿಯಲ್ಲಿರುವ ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಗಿದ್ದು, ಇಂದು ಹರ್ಯಾಣದ ಬಿವಾನಿ ಜಿಲ್ಲೆಯ ಬಾಮ್ಲಾಗೆ ಮೃತದೇಹವನ್ನು ತರಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ರಾಮ್ ಕಿಶನ್ ಗ್ರೆವಾಲ್ ಮನೆಗೆ ಮೊದಲು ಭೇಟಿ ನೀಡಿರುವ ರಾಹುಲ್ ಗಾಂಧಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರಾಹುಲ್ ಗಾಂಧಿಗೆ ಕಾಂಗ್ರೆಸ್ ಮುಖಂಡರಾದ ಕಮಲ್ ನಾಥ್, ಬುಪೀಂಧರ್ ಸಿಂಗ್ ಹೂಡಾಕಿರಣ್ ಚೌದರಿ, ಕುಲ್ದೀಪ್ ಮತ್ತಿತ್ತರು ಸಾಥ್ ನೀಡಿದ್ದಾರೆ.
ರಾಮ್ ಕಿಶನ್ ಗ್ರೆವಾಲ್ ಅವರ ಅಂತಿಮ ದರ್ಶನ ಪಡೆಯಲು ಗ್ರಾಮಸ್ಥರೆಲ್ಲಾ ಅವರ ಮನೆಯ ಮುಂದೆ ಸೇರಿದ್ದಾರೆ.
Advertisement