ಭಾರತ-ಪಾಕ್ ತಾತ್ಕಾಲಿಕವಾಗಿ ರಾಯಭಾರಿ ಅಧಿಕಾರಿಗಳು ಹಿಂದಕ್ಕೆ ಕರೆಸಿಕೊಳ್ಳುವ ಸಾದ್ಯತೆ: ವರದಿ

ತಮ್ಮ ದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಬೇಹುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಉಭಯ ರಾಷ್ಟ್ರಗಳು ಬೊಬ್ಬೆ ಹೊಡೆದುಕೊಳ್ಳುತ್ತಿರುವುದರಿಂದ...
ಭಾರತ-ಪಾಕಿಸ್ತಾನ
ಭಾರತ-ಪಾಕಿಸ್ತಾನ

ಇಸ್ಲಾಮಾಬಾದ್: ತಮ್ಮ ದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಬೇಹುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಉಭಯ ರಾಷ್ಟ್ರಗಳು ಬೊಬ್ಬೆ ಹೊಡೆದುಕೊಳ್ಳುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನ ತನ್ನ ರಾಯಭಾರಿ ಅಧಿಕಾರಿಗಳನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ಮುಂದಾಗಿವೆ ಎಂದು ವರದಿಯಾಗಿದೆ.

ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಅಧಿಕಾರಿಗಳು ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಕೆಲ ಪಾಕಿಸ್ತಾನ ರಾಯಭಾರಿ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಇದಾದ ಬಳಿಕ ಪಾಕಿಸ್ತಾನ ಸಹ ಭಾರತ ರಾಯಭಾರಿ ಅಧಿಕಾರಿಗಳು ಪಾಕಿಸ್ತಾನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪ ಹೊರಿಸಿದ್ದು ಇದರಿಂದಾಗಿ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟಿದ್ದು ಭಾರತ ಮತ್ತು ಪಾಕಿಸ್ತಾನ ತಮ್ಮ ರಾಯಭಾರಿ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳಲು ತೀರ್ಮಾನಿಸಿವೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಇತ್ತೀಚೆಗಷ್ಟೇ ದೆಹಲಿ ಪೊಲೀಸರು ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ವೀಸಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಅಖ್ತರ್ ಭಾರತೀಯ ಸೇನೆಯ ಚಲನವಲನಗಳ ರಹಸ್ಯ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು ಎಂದು ಬಂಧಿಸಿದ್ದರು. ಇದಾದ ಮೇಲೆ ಪಾಕಿಸ್ತಾನ ಎಟಿಗೆ ಎದುರೇಟು ಎಂಬಂತೆ ಭಾರತೀಯ ರಾಯಭಾರಿ ಅಧಿಕಾರಿಗಳು ಬೇಹುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com