ಜಮ್ಮು: ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಪರಿ ಜೀವನ್ಮರಣ ಹೋರಾಟ ನಡೆಸಿದ್ದಾರೆ.
ಅಂತಾರಾಷ್ಟ್ರೀಯ ಗಡಿಯಲ್ಲಿ ರಾಂಗೂರ್ ಕ್ಯಾಂಪ್ ಬಳಿ ನವೆಂಬರ್ 1 ರಂದು ಪಾಕಿಸ್ತಾನ ಸೈನಿಯಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕಿಯ ಕುತ್ತಿಗೆ, ಬೆನ್ನು ಮತ್ತು ಹೊಟ್ಟಿಗೆ ಭಾಗಗಳಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಿಧಿ ವಿಪರ್ಯಾಸ ಎಂಬಂತೆ ಇದೇ ದಾಳಿಯಲ್ಲಿ ಪರಿ ತನ್ನ ತಾತ, ಚಿಕ್ಕಮ್ಮ ಮತ್ತು ಇಬ್ಬರು ಸಹೋದರರನ್ನು ಕಳೆದುಕೊಂಡಿದ್ದು, ಆಕೆಯ ತಂದೆ ತಾಯಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪರಿ ಸಂಬಂಧಿಕರಾದ ಬಲ್ಜೀತ್ ಕುಮಾರ್ ಹೇಳಿದ್ದಾರೆ.
ಪರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಕೆಲ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.