ಮಿತಿ ಮೀರಿದ ವಾಯುಮಾಲಿನ್ಯ: ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎನ್'ಜಿಟಿ

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಾಖಲೆ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಾಖಲೆ ಮಟ್ಟಕ್ಕೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಕಿಡಿಕಾರಿದೆ.

ಕಳೆದ 17 ವರ್ಷಕ್ಕಿಂತಲೂ ಈ ಬಾರಿ ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ವಾಯು ಮಾಲಿನ್ಯ ಏರಿಕೆಯಾಗಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವಲ್ಲಿ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಿಡಿಕಾರಿದೆ.

ಅಧಿಕೃತ ವರದಿಗಳ ಪ್ರಕಾರ ದೀಪಾವಳಿ ಹಬ್ಬದ ಬಳಿಕ ದೆಹಲಿಯಲ್ಲಿ ಶೇ.62-7 ರಷ್ಟು ವಾಯುಮಾಲಿನ್ಯ ಏರಿಕೆಯಾಗಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿಯ ವಿರುದ್ಧ ತೀವ್ರವಾಗಿ ಕೆಂಡಾಮಂಡಲವಾಗಿರುವ ಹಸಿರುವ ನ್ಯಾಯಮಂಡಳಿಯು ಶೀಘ್ರಗತಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ವಾಯು ಮಾಲಿನ್ಯಕ್ಕೆ ದೆಹಲಿ ಸರ್ಕಾರ ಸ್ಪಷ್ಟನೆ ನೀಡಿದ್ದು, ನೆರೆ ರಾಜ್ಯಗಳಾದ ಹರಿಯಾಣ ಪಂಜಾಬ್ ಹಾಗೂ ರಾಜಸ್ತಾನದಲ್ಲಿ ಬೆಳೆಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದು, ಇದರಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಹೇಳಿದೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯವು ವಾಯುಮಾಲಿನ್ಯ ನಿಯಂತ್ರಣಕ್ಕೆ 10 ವರ್ಷದ ಹಳೆಯ ಡೀಸೆಲ್ ವಾಹನಗಳು ಹಾಗೂ ಲಘು ಡೀಸೆಲ್ ವಾಹನಗಳ ಸಂಚಾರಗಳ ಮೇಲೆ ಮೊದಲು ನಿರ್ಬಂಧ ಹೇರಿ ಎಂದು ಹೇಳಿದೆ, ಅಲ್ಲದೆ, ವಾಯುಮಾಲಿನ್ಯಕ್ಕೆ ಕಾರಣವಾಗಿರುವ ನಾಲ್ಕು ರಾಜ್ಯಗಳಾದ ಪಂಜಾಬ್, ಹರಿಯಾಣ. ದೆಹಲಿ ಹಾಗೂ ರಾಜಸ್ತಾನದ ಪರಿಸರ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದ್ದು, ಬೆಳಗಳಿಗೆ ಬೆಂಕಿ ಹಚ್ಚುತ್ತಿರುವ ಕುರಿತಂತೆ ನ.8ರ ಒಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com