ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ: ಸಾರ್ವಜನಿಕ ಚರ್ಚೆಗೆ ಪ್ರಧಾನಿ ಮೋದಿ ಕರೆ

ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆ ನಡೆಸುವ ಕುರಿತಂತೆ ದೇಶದಾದ್ಯಂತ ವ್ಯಾಪಕ ಸಾರ್ವಜನಿಕ ಚರ್ಚೆ ನಡೆಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆ ನಡೆಸುವ ಕುರಿತಂತೆ ದೇಶದಾದ್ಯಂತ ವ್ಯಾಪಕ ಸಾರ್ವಜನಿಕ ಚರ್ಚೆ ನಡೆಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ದೀಪಾವಳಿ ಮಂಗಳ ಮಿಲನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಕುರಿತಂತೆ ದೇಶದಾದ್ಯಂತ ವ್ಯಾಪಕವಾಗಿ ಚರ್ಚೆ ನಡೆಸಬೇಕಿದೆ. ಈ ವಿಚಾರದಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರಗಳನ್ನು ವಹಿಸಿದರೆ ಉತ್ತಮವಾಗಿರುತ್ತದೆ ಎಂದು ಹೇಳಿದ್ದಾರೆ.

ಅನೇಕ ರಾಜಕೀಯ ಪಕ್ಷಗಳ ನಾಯಕರು ಹಾಗೂ ಮುಖಂಡರುಗಳು ಈ ಬಗ್ಗೆ ಏನಾದರೂ ಮಾಡಬೇಕು, ನಿರ್ಧಾರಗಳನ್ನು ಕೈಗೊಳ್ಳಬೇಕೆಂದು ಹೇಳುತ್ತಿದ್ದಾರೆ. ಆದರೆ, ಈ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಇಂತಹ ವಿಚಾರದಲ್ಲಿ ಹಿಂಜರಿಯುವ ಅಗತ್ಯವಿಲ್ಲ. ಈ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗಬೇಕಿದೆ.  

ಏಕಕಾಲದಲ್ಲಿ ಚುನಾವಣೆ ನಡೆಸುವ ವಿಚಾರವನ್ನು ಸರ್ಕಾರ ಹೇರುತ್ತಿಲ್ಲ. ಈ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಲ್ಲಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ. ಏಕಕಾಲದಲ್ಲಿ ಚುನಾವಣೆ ನಡೆದರೆ, ಆರ್ಥಿಕ ಹೊರೆ ಕೂಡ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ಮನೋಹರ್ ಪರಿಕ್ಕರ್, ಜೆಡಿ. ನಡ್ಡಾ, ರಾಮ್ ಲಾಲ್ ಹಾಗೂ ಇನ್ನಿತರೆ ಹಿರಿಯ ನಾಯಕರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com