
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆದಿದ್ದು, ಮತ್ತೆ 2 ಸರ್ಕಾರಿ ಶಾಲೆಗಳಿಗೆ ಬೆಂಕಿ ಹೆಚ್ಚಿರುವ ಘಟನೆ ಬಂಡೀಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಹಲವು ದಿನಗಳಿಂದಲೂ ಜಮ್ಮುವಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚುತ್ತಲೇ ಬಂದಿದ್ದು, ಇಂದು ಕೂಡ 2 ಶಾಲೆಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸವನ್ನು ಮೆರೆದಿದ್ದಾರೆ. ದುಷ್ಕರ್ಮಿಗಳ ಈ ಅಟ್ಟಹಾಸಕ್ಕೆ ಈ ವರೆಗೂ 32 ಶಾಲೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಂಡೀಪುರ ಜಿಲ್ಲೆಯ ಸೈದ್ನಾರದಲ್ಲಿರುವ ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿರುವ ಅನಾಮಧೇಯ ವ್ಯಕ್ತಿಗಳು, ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
Advertisement