ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ಕೇಂದ್ರ ಮಧ್ಯಪ್ರವೇಶಕ್ಕೆ ಕೇಜ್ರಿವಾಲ್ ಆಗ್ರಹ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ....
ದಟ್ಟ ಹೊಗೆಯಿಂದ ಆವರಿಸಿರುವ ದೆಹಲಿಯ ವೈಮಾನಿಕ ಚಿತ್ರ
ದಟ್ಟ ಹೊಗೆಯಿಂದ ಆವರಿಸಿರುವ ದೆಹಲಿಯ ವೈಮಾನಿಕ ಚಿತ್ರ
Updated on: 
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಆಗ್ರಹಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ಸಮ-ಬೆಸ ವಾಹನಗಳ ಸಂಚಾರ ನಿಯಮ ಜಾರಿಗೆ ತರಲಾಗಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನೆ ಆಗಿಲ್ಲ. ಕಾರಣ ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರಿ ಪ್ರಮಾಣದ ಕೃಷಿ ತ್ಯಾಜ್ಯವನ್ನು ಸುಡಲಾಗುತ್ತಿದ್ದು, ಇದರಿಂದ ದೆಹಲಿಯಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ ಎಂದಿದ್ದಾರೆ.
ಇದೇ ವೇಳೆ ಮಿತಿಮೀರಿದ ವಾಯು ಮಾಲಿನ್ಯದಿಂದಾಗಿ ಇಂದು ದೆಹಲಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಸಿಎಂ, ದೀರ್ಘಕಾಲ ಶಾಲಾ, ಕಾಲೇಜ್ ಗಳಿಗೆ ರಜೆ ನೀಡುವುದು ಇದಕ್ಕೆ ಪರಿಹಾರ ಅಲ್ಲ ಎಂದರು.
ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಕೆಲವೇ ವಿಧಾನಗಳನ್ನು ಹೊಂದಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಅಗತ್ಯ ಇದೆ ಎಂದಿದ್ದಾರೆ.
ದೆಹಲಿಯಲ್ಲಿ ದಟ್ಟ ಹೊಗೆ ಮತ್ತು ವಾಯು ಮಾಲಿನ್ಯದ ಕಾರಣದಿಂದಾಗಿ ದೆಹಲಿಯ ಮೂರು ಮಹಾನಗರ ಪಾಲಿಕೆ ವ್ಯಾಪ್ತಿಯ 1800 ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com